News Karnataka Kannada
Saturday, May 18 2024
ದೇಶ

ಉಜ್ವಲ ದ್ವಿತೀಯ ಆವೃತ್ತಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

Photo Credit :
ನವದೆಹಲಿ ;  ಬಡಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕ ಒದಗಿಸುವ ಪ್ರಧಾನಮಂತ್ರಿ ಉಜ್ವಲ ಯೋಜನೆಯ(ಪಿಎಂಯುವೈ) ದ್ವಿತೀಯ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಿದ್ದಾರೆ.
ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ 1,000 ಮಹಿಳೆಯರಿಗೆ ವಿಡಿಯೊ ಕಾನ್ಛರೆನ್ಸ್ ಮೂಲಕ ಉಚಿತ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವರ್ಗಾಯಿಸಲಾಯಿತು. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕ, ಗ್ಯಾಸ್ ಸ್ಟೌವ್ ಜೊತೆಗೆ ಮೊದಲ ಬಾರಿಗೆ ಭರ್ತಿ ಸಿಲಿಂಡರ್ ದೊರೆಯಲಿದೆ.
2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವದಲ್ಲಿ ಜಾರಿಗೊಳಿಸಲಾದ ಉಜ್ವಲ ಯೋಜನೆ ಬಿಜೆಪಿಯ ಪ್ರಚಂಡ ಗೆಲುವಿಗೆ ಕಾರಣವಾಗಿತ್ತು. ಈ ಯೋಜನೆಯ ಮೊದಲ ಆವೃತ್ತಿಯಲ್ಲಿ ಸರ್ಕಾರವು ಎಲ್‌ಪಿಜಿ ಸಂಪರ್ಕಗಳಿಗೆ 1,600 ರೂ. (ಠೇವಣಿ ಹಣ)ದ ಆರ್ಥಿಕ ಸಹಾಯವನ್ನು ಮಾತ್ರ ನೀಡುತ್ತಿತ್ತು. ಈ ಯೋಜನೆಯಡಿ ಯಾವುದೇ ಬಡ್ಡಿ ಇಲ್ಲದೇ ಸ್ಟೌವ್ ಮತ್ತು ಸಿಲಿಂಡರ್‌ಗಾಗಿ ಸಾಲ ಪಡೆಯಬಹುದಾಗಿತ್ತು. ಮೊದಲ ಆವೃತ್ತಿಯ ಯೋಜನೆಯಡಿ ಉತ್ತರಪ್ರದೇಶದ ಬಡವರಿಗೆ 1,47,43,862 ಉಚಿತ ಎಲ್‌ಪಿಜಿ ಸಂಪರ್ಕಗಳನ್ನು ಒದಗಿಸಲಾಗಿತ್ತು. ಉಜ್ವಲ-2 ಯೋಜನೆಯಡಿ ಮೋದಿ ಸರ್ಕಾರ ಈ ಆರ್ಥಿಕ ವರ್ಷದಲ್ಲಿ ಬಡ ಕುಟುಂಬಗಳಿಗೆ ಉಚಿತವಾಗಿ ಒಂದು ಕೋಟಿ ಗ್ಯಾಸ್ ಸಂಪರ್ಕ ಕಲ್ಪಿಸುವ ಗುರಿ ಹೊಂದಿದೆ. ಈಗಾಗಲೇ ೫ ಕೋಟಿ ಫಲಾನುಭವಿಗಳಿರುವ ಈ ಯೋಜನೆಯಡಿ ಒಂದು ಕೋಟಿಗೂ ಹೆಚ್ಚು ಕುಟುಂಬಗಳನ್ನು ಸೇರಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಕಳೆದ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು