Categories: ದೇಶ

ಉಡುಗೊರೆ ಹರಾಜಿನಲ್ಲಿ ಪಾಲ್ಗೊಳ್ಳಿ: ಮೋದಿ ಸಲಹೆ

ಲಖನೌ: ಹಲವು ವರ್ಷಗಳಿಂದ ತಾವು ಪಡೆದ ಉಡುಗೊರೆಗಳು ಮತ್ತು ಸ್ಮರಣಿಕೆಗಳನ್ನು ಹರಾಜಿಗೆ ಇಡಲಾಗಿದ್ದು ಜನರು ಇದರಲ್ಲಿ ಭಾಗವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಹರಾಜಿನಿಂದ ಬರುವ ಹಣ ‘ನವಾಮಿ ಗಂಗೆ’ ಯೋಜನೆಗೆ ಬಳಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

‘ಕೆಲವು ವರ್ಷಗಳಿಂದ ನಾನು ಹಲವಾರು ಉಡುಗೊರೆ ಮತ್ತು ಸ್ಮರಣಿಕೆಗಳನ್ನು ಸ್ವೀಕರಿಸಿದ್ದೇನೆ. ಇದನ್ನು ಹರಾಜು ಮಾಡಲಾಗುತ್ತಿದೆ. ಇದರಲ್ಲಿ ಒಲಿಂಪಿಕ್‌ ವಿಜೇತರು ನೀಡಿದ ವಿಶೇಷ ಸ್ಮರಣಿಕೆಗಳೂ ಇದ್ದು ಜನರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು’ ಎಂದು ಟ್ವೀಟ್‌ ಮಾಡಿದ್ದಾರೆ.

ಗಂಗಾ ನದಿಯ ಸಂರಕ್ಷಣೆ ಮತ್ತು ಪುನರುಜ್ಜೀವನದ ಗುರಿಯನ್ನು ‘ನವಾಮಿ ಗಂಗೆ’ ಯೋಜನೆ ಹೊಂದಿದೆ.

ಸಂಸ್ಕೃತಿ ಸಚಿವಾಲಯವು ಕೈಗೊಂಡ ಹರಾಜು ಪ್ರಕ್ರಿಯೆಯಲ್ಲಿ ಕ್ರೀಡಾ ಸಲಕರಣೆಗಳು ಮತ್ತು ಕೃಷ್ಣಾನಗರದ ಬಾಡ್ಮಿಂಟನ್‌ ರಾಕೆಟ್‌ಗಳೂ ಸೇರಿದ್ದು ಇ– ಹರಾಜಿನಲ್ಲಿ ಗರಿಷ್ಠ ಬಿಡ್‌ಗಳನ್ನು ಕಂಡಿವೆ.

Sampriya YK

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago