ದೇಶ

ಉತ್ತರಾಖಂಡ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ

ಡೆಹ್ರಾಡೂನ್, : ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆಯಾಗಿದ್ದಾರೆ. ತೀರಥ್ ಸಿಂಗ್ ರಾವತ್ ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಇಂದು ಹೊಸ ಶಾಸಕಾಂಗ ಪಕ್ಷದ ನಾಯಕ ಆಯ್ಕೆಗೆ ವೀಕ್ಷಕರಾಗಿ ಹೈಕಮಾಂಡ್ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಕಳುಹಿಸಿತ್ತು.
ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ನರೇಂದ್ರ ಸಿಂಗ್ ತೋಮರ್ ಶಾಸಕರ ಒಪ್ಪಿಗೆ ಮೇರೆಗೆ ಪುಷ್ಕರ್ ಸಿಂಗ್ ಧಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಖತೀಮ್ ಕ್ಷೇತ್ರದ ಹಾಲಿ ಶಾಸಕರಾಗಿರುವ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡದ 11ನೇ ಸಿಎಂ ಆಗಿ ಶೀಘ್ರದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಮಾತನಾಡಿರುವ ರಾವತ್, ಸಾಂವಿಧಾನಿಕ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ. ಉತ್ತರಾಖಂಡ್‌ ವಿಧಾನಸಭೆಗೆ ಒಂದು ವರ್ಷದ ಒಳಗೆ ಚುನಾವಣೆ ನಡೆಯಲಿದ್ದು, ಚುನಾವಣಾ ವರ್ಷದಲ್ಲಿ ಧಾಮಿ ಸಿಎಂ ಸ್ಥಾನಕ್ಕೇರಿದ್ದಾರೆ. ಪಕ್ಷವನ್ನು ಮರಳಿ ಅಧಿಕಾರಕ್ಕೇ ತರುವ ಹೊಣೆ ಈಗ ಅವರ ಮೇಲಿದೆ. ಶಾಸಕರಲ್ಲದೆ ಸಿಎಂ ಸ್ಥಾನಕ್ಕೇರಿದ್ದ ಅವರು ಹುದ್ದೆ ಉಳಿಸಿಕೊಳ್ಳಬೇಕಿದ್ದರೆ ಆರು ತಿಂಗಳ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿತ್ತು. ಆದರೆ ಸೆಪ್ಟೆಂಬರ್‌ 10ರ ಒಳಗೆ ಶಾಸಕರಾಗುವ ಸಾಧ್ಯತೆಯೇ ಇಲ್ಲದ ಕಾರಣಕ್ಕೆ ಅವರು ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದುಕೊಳ್ಳಲಾಗಿದೆ. ಕೊರೊನಾದಿಂದಾಗಿ ಉಪ ಚುನಾವಣೆ ನಡೆಯದೆ ಇರುವುದರಿಂದಾಗಿ ಈ ನಿರ್ಧಾರ ಸರಿಯೆಂದು ಭಾವಿಸುತ್ತಿದ್ದೇನೆ ಎಂದಿದ್ದರು. ಇದೀಗ ಮುಖ್ಯ ಮಂತ್ರಿ ಸ್ಥಾನಕ್ಕೆ ಪುಷ್ಕರ್ ಸಿಂಗ್ ಧಾಮಿ ಆಯ್ಕೆಯಾಗಿದ್ದಾರೆ. ಸಿಎಲ್‍ಪಿ ಸಭೆಯಲ್ಲಿ ಸರ್ವಾನುಮತದಿಂದ ಪುಷ್ಕರ್ ಸಿಂಗ್ ಧಾಮಿ ಆಯ್ಕೆ ಮಾಡಲಾಗಿದೆ. ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ತೀರಥ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ. ರಾವತ್ ಉತ್ತರಾಖಂಡದ ಮುಖ್ಯಮಂತ್ರಿಯಾಗಿ 2021ರ ಮಾರ್ಚ್ ತಿಂಗಳಲ್ಲಿ ಅಧಿಕಾರವಹಿಸಿಕೊಂಡಿದ್ದರು. ಆದಾದ ಬಳಿಕ ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ.

Indresh KC

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

13 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

31 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

48 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago