News Karnataka Kannada
Saturday, May 11 2024
ದೇಶ

ಎರಡು ದಿನಗಳ ನಂತರ ಮತ್ತೆ ಇಂಧನ ದರ ಹೆಚ್ಚಳ

Petrol Desiel
Photo Credit :

ನವದೆಹಲಿ:ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಸತತ ಎರಡು ದಿನಗಳ ಕಾಲ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.27, ಬುಧವಾರ) ಕೂಡ ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಇಂದು ಬುಧವಾರ (ಅ.27) ಮತ್ತೆ ತೈಲ ದರ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿ ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ.

ಈಗಾಗಲೇ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಈ ಹಬ್ಬದ ಋತುವಿನಲ್ಲಿ ಇಂಧನ ದರ ಏರುಗತಿಯಲ್ಲಿ ಸಾಗುತ್ತಿದೆ. ಈ ಮೂಲಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು