ದೇಶ

ಎಲ್ಲಿಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಮುಂದುವರಿಯಬೇಕು : ದತ್ತಾತ್ರೇಯ ಹೊಸಬಾಳೆ

ನವದೆಹಲಿ : ಎಲ್ಲಿಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ  ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಪ್ರತಿಪಾದಿಸಿದ್ದಾರೆ. ಅಲ್ಲದೆ, ‘ನಾನು ಮತ್ತು ಆರ್‌ಎಸ್‌ಎಸ್‌ ಎಂದೆಂದಿಗೂ ಮೀಸಲಾತಿಯ ಪ್ರಬಲ ಬೆಂಬಲಿಗರು’ ಎಂದು ಅವರು ಒತ್ತಿ ಹೇಳಿದ್ದಾರೆ.

ಮಂಗಳವಾರ ಇಂಡಿಯಾ ಫೌಂಡೇಶನ್‌ ಏರ್ಪಡಿಸಿದ್ದ ‘ಆಧುನಿಕ ದಲಿತ ಇತಿಹಾಸದ ನಿರ್ಮಾತೃಗಳು’ ಇಂಗ್ಲಿಷ್‌ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ದಲಿತರ ಇತಿಹಾಸವಿಲ್ಲದೆ ಭಾರತದ ಇತಿಹಾಸ ಅಪೂರ್ಣವಾಗಲಿದೆ. ಭಾರತದ ಇತಿಹಾಸವು ದಲಿತರ ಇತಿಹಾಸಕ್ಕಿಂತ ಭಿನ್ನವೇನೂ ಅಲ್ಲ’ ಎಂದು ಹೇಳಿದರು.

ಇದೇ ವೇಳೆ ತುಳಿತಕ್ಕೊಳಪಟ್ಟಸಮುದಾಯಗಳ ಮೀಸಲಾತಿ ಬಗ್ಗೆ ಪ್ರತಿಕ್ರಿಯಿಸಿ, ‘ಸಾಮಾಜಿಕ ಸಾಮರಸ್ಯ ಮತ್ತು ಸಾಮಾಜಿಕ ನ್ಯಾಯ ಎಂಬ ವಿಚಾರಗಳು ನಮ್ಮ ಪಾಲಿಗೆ ರಾಜಕೀಯ ತಂತ್ರಗಳಲ್ಲ. ಬದಲಾಗಿ ಈ ಎರಡೂ ಅಂಶಗಳು ನಂಬಿಕೆಯ ವಿಷಯಗಳು. ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ವಿರೋಧಿ ಹೋರಾಟಗಳು ನಡೆದಾಗ ನಾವು ಮೀಸಲಾತಿ ಪರ ಉಪನ್ಯಾಸ ಆಯೋಜಿಸಿದ್ದೇವೆ’ ಎಂದರು.

Raksha Deshpande

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago