Categories: ದೇಶ

ಒಮಿಕ್ರಾನ್‌ ಎದುರಿಸಲು ಆಸ್ಪತ್ರೆಯಲ್ಲಿ ಮೂಲಸೌಕರ್ಯ ಸಿದ್ಧಗೊಳಿಸಿ : ಕೇಂದ್ರ ಸೂಚನೆ

ಕೋವಿಡ್‌ ರೂಪಾಂತರಿ ಒಮಿಕ್ರಾನ್‌ ಮೂರನೇ ಅಲೆಯಾಗುವ ಸಾಧ್ಯತೆ ಇದ್ದು, ಸಂಭವನೀಯ ಮೂರನೇ ಅಲೆ ಎದುರಿಸಲು ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳು ಸಿದ್ಧವಾಗಿರುವಂತೆ ನೋಡಿಕೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯದ ಸರ್ಕಾರಗಳಿಗೆ ಸೂಚನೆ ನೀಡಿದೆ.

ಒಮಿಕ್ರಾನ್​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ, ನಿರ್ಣಾಯಕ ಔಷಧಿಗಳ ಸಾಕಷ್ಟು ದಾಸ್ತಾನು ಮಾಡಿಕೊಳ್ಳುವಂತೆ ಕೇಂದ್ರ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ತುರ್ತು ಪ್ರತಿಕ್ರಿಯೆ ಮತ್ತು ಆರೋಗ್ಯ ವ್ಯವಸ್ಥೆಯ ಸನ್ನದ್ಧತೆಯ ಪ್ಯಾಕೇಜ್‌ನ ವೆಚ್ಚವನ್ನು ಕೇಂದ್ರ ಮೇಲ್ವಿಚಾರಣೆ ಮಾಡುತ್ತಿದೆ. ರಾಜ್ಯ ಸರ್ಕಾರಗಳು ಹೊಂದಾಣಿಕೆಯ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ಹೇಳಿದರು.

ಕ್ಷೇತ್ರ ಮಟ್ಟದಲ್ಲಿ ವೆಂಟಿಲೇಟರ್‌ಗಳು, ಪಿಎಸ್‌ಎ ಪ್ಲಾಂಟ್‌ಗಳು, ಆಮ್ಲಜನಕ ಸಾಂದ್ರೀಕರಣ ಸೇರಿದಂತೆ ಮೂರನೇ ಅಲೆ ಎದುರಿಸಲು ಆರೋಗ್ಯ ಸೌಲಭ್ಯಗಳು ಹೊಂದಿವೆ ಎಂದು ಖಚಿತಪಡಿಸಿಕೊಳ್ಳಬೇಕು ಮತ್ತು  ಕೇಂದ್ರ ಸರ್ಕಾರ ಪೂರೈಸಿದ ಅನೇಕ ವೆಂಟಿಲೇಟರ್‌ಗಳು ಇನ್ನೂ ಕೆಲವು ಆಸ್ಪತ್ರೆಗಳಲ್ಲಿ ಪ್ಯಾಕ್ ಓಪನ್ ಮಾಡದೆ ಮತ್ತು ಬಳಕೆಯಾಗದೆ ಇವೆ ಈ ಬಗ್ಗೆಯೂ ಗಮನ ಹರಿಸಬೇಕು ಎಂದು ಸೂಚಿಸಿದ್ದಾರೆ.

Sneha Gowda

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

5 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

18 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

33 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

55 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago