ದೇಶ

ಕಳೆದ ಐದು ವರ್ಷದಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ ಎಷ್ಟು ಗೊತ್ತಾ ?

ನವದೆಹಲಿ: ಕಳೆದ ಐದು ವರ್ಷದಲ್ಲಿ ಹುತಾತ್ಮರಾದ ಯೋಧರ ಸಂಖ್ಯೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಸದನಕ್ಕೆ ತಿಳಿಸಿತು. 2019ರಲ್ಲಿಯೇ ಅತಿ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.
ಕೇಂದ್ರ ಗೃಹಇಲಾಖೆ ರಾಜ್ಯಮಂತ್ರಿ ನಿತ್ಯಾನಂದ್ ರಾಯ್ ಸದನಕ್ಕೆ ಮಾಹಿತಿ ನೀಡಿದರು. 2016 ರಿಂದ 2020ರ ಅವಧಿಯಲ್ಲಿ ಒಟ್ಟು 355 ಯೋಧರು ಹುತಾತ್ಮರಾಗಿದ್ದಾರೆ. ಸಿಆರ್ ಪಿಎಫ್ ನ 209, ಅಸ್ಸಾಂ ರೈಫಲ್ಸ್ ನ 37, ಬಿಎಸ್‍ಎಫ್ ನ 78, ಐಟಿಬಿಪಿ ಯ 16, ಎಸ್‍ಎಸ್‍ಬಿ 8 ಮತ್ತು ಸಿಐಎಸ್‍ಎಫ್ 7 ಯೋಧರು ವೀರ ಮರಣ ಹೊಂದಿದ್ದಾರೆ.
ಅಸ್ಸಾಂ ಮತ್ತು ಮಿಜೊರಾಂ ಗಡಿ ವಿವಾದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೇಂದ್ರ ಸರ್ಕಾರ ಲಿಖಿತ ರೂಪದಲ್ಲಿ ಸದನಕ್ಕೆ ನೀಡಿತು. ಅಸ್ಸಾಂ ಮತ್ತು ಮಿಜೊರಾಂ ರೀತಿಯಲ್ಲಿ ಆರು ರಾಜ್ಯಗಳಲ್ಲಿ ಗಡಿ ವಿವಾದಗಳಿವೆ. ಇನ್ನು ಕೆಲವು ರಾಜ್ಯಗಳಲ್ಲಿ ಕ್ಷೇತ್ರಗಳಿಗೆ ಸಂಬಂಧಿಸಿದ ವಿವಾದಗಳು ಇತ್ಯರ್ಥವಾಗಬೇಕಿದೆ.
ಸೋಮವಾರ ಅಸ್ಸಾಂ ಮತ್ತು ಮಿಜೊರಾಂ ರಾಜ್ಯಗಳ ನಡುವೆ ಸಂಬಂಧಿಸಿದ ಗಡಿ ಜಗಳ ಹಿಂಸಾಚಾರಕ್ಕೆ ತಿರುಗಿತ್ತು. ಎರಡೂ ರಾಜ್ಯಗಳ ಪೊಲೀಸರು ಮತ್ತು ಜನರು ಪರಸ್ಪರ ಹೊಡೆದಾಟಕ್ಕೆ ಮುಂದಾಗಿ, ಗುಂಡಿನ ದಾಳಿ ಸಹ ನಡೆದಿತ್ತು. ಈ ಗುಂಡಿನ ದಾಳಿಯಲ್ಲಿ ಒಟ್ಟು ಆರು ಪೊಲೀಸರು ಹುತಾತ್ಮರಾಗಿದ್ದಾರೆ.

 

Indresh KC

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago