ಕಳೆದ ವರ್ಷ ರಸ್ತೆ ಅಪಘಾತದಲ್ಲಿ 1.20 ಲಕ್ಷ ಜನ ಸಾವು

ನವದೆಹಲಿ: ಕಳೆದ ವರ್ಷ ದೇಶದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಸಾವು ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ಲಾಕ್ ಡೌನ್ ಹೊರತಾಗಿಯೂ ಪ್ರತಿದಿನ ಸರಾಸರಿ 328 ಜನರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ನೀಡಿರುವ ವಾರ್ಷಿಕ ಕ್ರೈಮ್ ಇಂಡಿಯಾ  ವರದಿ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ 3.92 ಲಕ್ಷ ಮಂದಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದ ನಿರ್ಲಕ್ಷದಿಂದ ಸಾವನ್ನಪ್ಪಿರುವುದಾಗಿ ಬಹಿರಂಗಪಡಿಸಿದೆ.  2020ರಲ್ಲಿ 1.20 ಲಕ್ಷ ಇಂತಹ ಸಾವಿನ ಪ್ರಕರಣಗಳು ದಾಖಲಾಗಿದ್ದರೆ 2019ರಲ್ಲಿ 1.36 ಲಕ್ಷ ಮತ್ತು 2018ರಲ್ಲಿ 1.35 ಲಕ್ಷ ಸಾವಿನ ಪ್ರಕರಣಗಳು ದಾಖಲಾಗಿವೆ.

2018ರಿಂದ 1.35 ಲಕ್ಷ ಹಿಟ್ ಅಂಡ್ ರನ್ ಪ್ರಕರಣಗಳು ದೇಶದಲ್ಲಿ ದಾಖಲಾಗಿರುವುದಾಗಿ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಎನ್ ಸಿಆರ್ ಬಿ ಮಾಹಿತಿ ನೀಡಿದೆ.  ಕಳೆದ ವರ್ಷದಲ್ಲಿಯೇ 41,196 ಹಿಟ್ ಅಂಡ್ ರನ್ ಪ್ರಕರಣಗಳು ದಾಖಲಾಗಿವೆ. 2019ರಲ್ಲಿ 47,028 ಮತ್ತು 2018ರಲ್ಲಿ 47, 504 ಹಿಟ್ ಅಂಡ್ ರನ್ ಪ್ರಕರಣಗಳು ದಾಖಲಾಗಿದ್ದವು.

ಸಾರ್ವಜನಿಕ ದಾರಿಯಲ್ಲಿ ವೇಗವಾಗಿ ಅಥವಾ ನಿರ್ಲಕ್ಷ್ಯದ ಚಾಲನೆಯಿಂದ ಕಳೆದ ವರ್ಷ 1.30 ಲಕ್ಷ ನೋಯಿಸಿದ (ಹರ್ಟ್) ಪ್ರಕರಣಗಳು ದಾಖಲಾಗಿವೆ. ಈ ಮಧ್ಯೆ ಕಳೆದ ವರ್ಷ ರೈಲು ಅಪಘಾತಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದಿಂದ 52 ಸಾವಿನ ಪ್ರಕರಣಗಳು ದಾಖಲಾಗಿವೆ.

ಕೋವಿಡ್-19 ಲಾಕ್ ಡೌನ್ ಕಾರಣ ಕಳೆದ ವರ್ಷ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರ ವಿರುದ್ಧದ ಅಪರಾಧ, ಕಳ್ಳತನ, ದರೋಡೆ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗಿರುವುದಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಮಾಹಿತಿ ನೀಡಿದೆ.

Raksha Deshpande

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago