News Karnataka Kannada
Monday, April 29 2024
ದೇಶ

ಕಾಂಗ್ರೆಸ್ ಗೆ ಮುಜುಗರ ತಂದ ರಮೇಶ್ ಕುಮಾರ್ ಹೇಳಿಕೆ: ಪ್ರಿಯಾಂಕಾ ಗಾಂಧಿ ವಾದ್ರಾ ಖಂಡನೆ

Priyanka Gandhi
Photo Credit :

ರಾಜ್ಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರ ಕುರಿತು ವಿವಾದಾತ್ಮಕ ಹೇಳಿಕೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತಮ್ಮ ಪಕ್ಷದ ನಾಯಕ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ‘ರಮೇಶ್​ಕುಮಾರ್ ಅವರು ನೀಡಿದ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ರಮೇಶ್​ಕುಮಾರ್ ಹೇಳಿರುವ ಪದಗಳನ್ನು ವಿವರಿಸಲು ಸಾಧ್ಯವಿಲ್ಲ. ಅವುಗಳನ್ನು ಸಮರ್ಥನೆ ಮಾಡಿಕೊಳ್ಳಲೂ ಸಾಧ್ಯವಾಗುವುದಿಲ್ಲ. ಅತ್ಯಾಚಾರ ಘೋರ ಅಪರಾಧ. ಪೂರ್ಣ ವಿರಾಮ’ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಇನ್ನು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದು, ‘ಅವರು ಈ ಮಾತು ಹೇಳಬಾರದಿತ್ತು. ಅವರು ಅನುಭವಿ ರಾಜಕಾರಣಿಯಾಗಿದ್ದು, 2 ಬಾರಿ ಸ್ಪೀಕರ್ ಆಗಿದ್ದರು. ಅವರು ಕ್ಷಮೆಯಾಚಿಸಿರುವುದರಿಂದ ವಿಷಯವನ್ನು ಎಳೆದು ತರುವುದು ಬೇಡ’ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು