News Karnataka Kannada
Thursday, May 02 2024
ದೇಶ

ಕಾಂಗ್ರೆಸ್ ತೊರೆದು ಟಿಎಂಸಿಗೆ ಸೇರಿದ ಮಾಜಿ ಸಂಸದೆ ಸುಷ್ಮಿತ ದೇವ್

Sushmitha Dev 17082021
Photo Credit :

ಕೋಲ್ಕತ್ತಾ: ಕಾಂಗ್ರೆಸ್ ತೊರೆದ ನಂತರ ಅಸ್ಸಾಂ ನ ಮಾಜಿ ಸಂಸದೆ ಸುಷ್ಮಿತಾ ದೇವ್ ಆ.16 ರಂದು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕೊಲ್ಕತ್ತಾದಲ್ಲಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ಸುಷ್ಮಿತ ದೇವ್ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಸುಷ್ಮಿತ ದೇವ್ ಕಾಂಗ್ರೆಸ್‌ನ ಅಖಿಲ ಭಾರತೀಯ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದರು.

ಆ.15 ರಂದು ತಮ್ಮ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ತಲುಪಿಸಿದ್ದರು. ಟಿಎಂಸಿಯ ಹಿರಿಯ ನಾಯಕರೊಬ್ಬರು ಸುಷ್ಮಿತ ದೇವ್ ಅವರ ಸೇರ್ಪಡೆ ಬಗ್ಗೆ ಮಾಹಿತಿ ನೀಡಿದ್ದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸುಷ್ಮಿತ ದೇವ್ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಪಕ್ಷದ ಹೈಕಮಾಂಡ್ ಅವರಿಗೆ ಸಾಕಷ್ಟು ಮಹತ್ವ ನೀಡಿತ್ತು. ಆದರೆ ರಾಜಕೀಯ ಕಾರಣಗಳಿಂದಾಗಿ ಅವರು ಪಕ್ಷಾಂತರ ಮಾಡಿರಬಹುದು ಎಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷ ಭುಪೇನ್ ಬೋರಾ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು