ಕಾಲಹರಣ ಮಾಡದೆ ಓದು ಎಂದಿದ್ದಕ್ಕೆ ತಾಯಿಯನ್ನು ಕೊಂದ ಬಾಲಕಿ

ಮುಂಬೈ : ಓದುವಂತೆ ಒತ್ತಾಯ ಪಡಿಸಿದ  ತಾಯಿಯನ್ನು  15 ವರ್ಷದ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ  ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಅಮಾನವೀಯ  ಘಟನೆ  ಮುಂಬೈನಲ್ಲಿ ನಡೆದಿದೆ.
ಜುಲೈ ೩೦ ರಂದೇ ನವಿ ಮುಂಬೈನ ಐರೋಲಿ ಪ್ರದೇಶದಲ್ಲಿ ಮಹಿಳೆಯೋರ್ವಳು ಮೃತಪಟ್ಟಿರುವ ಬಗ್ಗೆ ವರದಿಯಾಗಿತ್ತು. ಆ ಸಂದರ್ಭದಲ್ಲಿ ಮಹಿಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸತ್ತಿದ್ದಾರೆ ಎಂದು ಆಕೆಯ ೧೫ ವರ್ಷದ ಮಗಳು ಹೇಳಿಕೆ ನೀಡಿದ್ದಳು. ಪೊಲೀಸರು ಕೂಡಾ ಅದನ್ನು ಸಹಜ ಸಾವು ಎಂದು ದಾಖಲಿಸಿಕೊಂಡಿದ್ದರು.
ಮಗಳನ್ನು ಮೆಡಿಕಲ್ ಓದಿಸಬೇಕೆನ್ನುವ ಅದಮ್ಯ ಆಸೆಯನ್ನು ಇಟ್ಟುಕೊಂಡಿದ್ದ ತಾಯಿ ಮತ್ತು ಮಗಳ ನಡುವೆ ಅದೇ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಬಾಲಕಿಗೆ ಮೆಡಿಕಲ್ ಕೋರ್ಸ್ ಓದಲು ಇಷ್ಟವಿರಲಿಲ್ಲ. ಮಹಿಳೆ ಸಾಯುವುದಕ್ಕೂ ಒಂದು ತಿಂಗಳ ಹಿಂದೆ, ಓದುವ ವಿಚಾರವಾಗಿ ತಾಯಿ ತನಗೆ ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಳು. ಆ ಸಂದರ್ಭದಲ್ಲಿ ಪೊಲೀಸರು ಮನೆಯವರನ್ನು ಕರೆಸಿ ಸಮಾಲೋಚನೆ ನಡೆಸಿ ಕುಟುಂಬಸ್ಥರಿಗೆ ತಿಳಿ ಹೇಳಿದ್ದರು. ಆದರೆ ಪರಿಸ್ಥಿತಿ ಕೊಲೆಯ ಮಟ್ಟಕ್ಕೆ ಬರುತ್ತದೆ ಎಂದು ಅವರು ಎಣಿಸಿರಲಿಲ್ಲ.
ಶವದ ಮರಣೋತ್ತರ ಪರೀಕ್ಷೆಯ ವೇಳೆ ಮಹಿಳೆಯ ಸಾವು ಆಕಸ್ಮಿಕವಲ್ಲ, ಆಕೆಯನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎನ್ನುವುದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಾಲಕಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಕೃತ್ಯ ಬಯಲಾಗಿದೆ. ಬಾಲಕಿ ವಿರುದ್ಧ ಪೊಲೀಸರು ಸೆಕ್ಷನ್ ೩೦೨ರ ಅಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ
Raksha Deshpande

Recent Posts

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

11 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

3 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago