News Karnataka Kannada
Saturday, May 04 2024
ದೇಶ

ಕೃಷಿ ವಿರೋಧಿ ಕಾನೂನುಗಳನ್ನು ವಾಪಸ್‌ ಪಡೆಯಿರಿ: ರಾಹುಲ್‌ ಒತ್ತಾಯ

Rahul Gandhi Dt 19 6 21 No1962118 Newsk 1247494964
Photo Credit :

ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳು ಕೃಷಿ ವಿರೋಧಿಯಾಗಿದ್ದು, ವಾಪಸ್‌ ಪಡೆಯಬೇಕು ಎಂದು ಕಾಂಗ್ರೆಸ್ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಒಂಬತ್ತು ತಿಂಗಳು ಪೂರ್ಣಗೊಂಡಿದೆ.

ಈ ನಡುವೆ ರೈತರ ಪರ ಮಗದೊಮ್ಮೆ ಧ್ವನಿ ಎತ್ತಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ಬಂಡವಾಳಶಾಹಿಯನ್ನು ಉತ್ತೇಜಿಸುತ್ತಿದೆ ಎಂದು ದೂರಿದ್ದಾರೆ.

‘ಹೊಲಗಳು ಮರಳು ಆಗಲು ಬಿಡುವುದಿಲ್ಲ, ಅದನ್ನು ಅವರ ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲು ಬಿಡುವುದಿಲ್ಲ. ಕೃಷಿ ವಿರೋಧಿ ಕಾನೂನುಗಳನ್ನು ಹಿಂಪಡೆಯಿರಿ’ ಎಂದು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು