ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ಪ್ರತಿಭಟನಾ ನಿರತ ರೈತರ ಮೇಲೆ ಬಲಪ್ರಯೋಗ ಮಾಡುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ದೆಹಲಿಯ ಹೊರ ವಲಯದಲ್ಲಿರುವ ಸಾವಿರಾರು ರೈತರು ಪ್ರತಿಭಟನೆ ನಡೆಸಿದರು.
ಶಸ್ತ್ರರಹಿತವಾಗಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ಬಲ ಪ್ರಯೋಗ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಲು ಸಾವಿರಾರು ಮಂದಿ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಎಂದು ಹಿರಿಯ ರೈತ ಮುಖಂಡ ಬಲಬೀರ್ ಸಿಂಗ್ ರಾಜೇವಾಲ ಹೇಳಿದರು.
ನವದೆಹಲಿಯಿಂದ 150 ಕಿ.ಮೀ ದೂರವಿರುವ, ನೆರೆಯ ಹರಿಯಾಣ ರಾಜ್ಯಕ್ಕೆ ಸೇರಿರುವ ಬೃಹತ್ ಧಾನ್ಯ ಮಾರುಕಟ್ಟೆಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಇದೇ ಸಮಯದಲ್ಲಿ ಹರಿಯಾಣ ರಾಜ್ಯದ ಪ್ರಮುಖ ಸರ್ಕಾರಿ ಕಚೇರಿ ಎದುರು ರೈತರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ರಾಜೇವಾಲ ಹೇಳಿದರು.
ಪ್ರತಿಭಟನಾ ನಿರತ ರೈತರ ಮೇಲೆ ಮಿತಿಮೀರಿ ಬಲ ಪ್ರಯೋಗ ಮಾಡುವುದು ಕೇವಲ ಕ್ರೂರ ಮಾತ್ರವಲ್ಲ, ಇದು ಪ್ರತೀಕಾರದ ಕೃತ್ಯವಾಗಿದೆ ಎಂದು ಅವರು ಹೇಳಿದರು.