News Karnataka Kannada
Tuesday, April 30 2024
ದೇಶ

ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ ರಾಜೀನಾಮೆ ; ರಾಜ್ಯದಿಂದ ನಾಲ್ವರಿಗೆ ಸ್ಥಾನ ?

Dvs Gowda Bangalore 7 7 21
Photo Credit :

ಬೆಂಗಳೂರು, ; ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯಾಗಲಿದ್ದು, ಕರ್ನಾಟಕದ ನಾಲ್ವರು ಸಂಪುಟ ಸೇರಲಿದ್ದಾರೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಸಚಿವ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಸದಾನಂದ ಗೌಡರ ಹೇಳಿಕೆಯನ್ನು ಪಿಟಿಐ ವರದಿ ಮಾಡಿದೆ.
68 ವರ್ಷದ ಡಿ. ವಿ. ಸದಾನಂದ ಗೌಡ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಎರಡು ಬಾರಿ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಕರ್ನಾಟಕದ ನಾಲ್ವರು ಸಚಿವರಾಗಿ ಸೇರ್ಪಡೆಗೊಳ್ಳಲಿದ್ದಾರೆ. ಡಿ. ವಿ. ಸದಾನಂದ ಗೌಡ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರ್ಪಡೆಗೊಳ್ಳುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಬೀದರ್ ಸಂಸದ ಭಗವಂತ ಖೂಬಾ, ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿ ಮತ್ತು ರಾಜ್ಯಸಭಾ ಸದ್ಯರಾಗಿರುವ ರಾಜೀವ್ ಚಂದ್ರಶೇಖರ್ ಸಚಿವರಾಗಲಿದ್ದಾರೆ.
ಸಂಜೆ 6 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆರೋಗ್ಯ ಸಚಿವರಾಗಿದ್ದ ಡಾ. ಹರ್ಷವರ್ಧನ್ ಸೇರಿದಂತೆ ಅನೇಕ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು