Categories: ದೇಶ

ಕೇಂದ್ರ ಸರ್ಕಾರದ ‘ಉತ್ತಮ ಆಡಳಿತ ಸಪ್ತಾಹ’ಕ್ಕೆ ಇಂದು ಚಾಲನೆ

ಬಿಜೆಪಿ ರಾಷ್ಟ್ರಾದ್ಯಂತ ಇಂದಿನಿಂದ ಏಳು ದಿನಗಳ ಕಾಲ ಉತ್ತಮ ಆಡಳಿತ ವಾರವನ್ನು( good governance) ಆಚರಿಸಲಿದೆ. ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹಾರ ಮಾಡಿ ಉತ್ತಮ ಸೇವೆ ನೀಡುವ ಉದ್ದೇಶ ಸಪ್ತಾಹದ್ದಾಗಿದೆ.

ಇಂದಿನಿಂದ ದೇಶದ ಎಲ್ಲ ರಾಜ್ಯಗಳಲ್ಲಿ ಸಪ್ತಾಹ ಆರಂಭವಾಗಲಿದೆ. ಆಜಾದಿ ಕಾ ಅಮೃತಮಹೋತ್ಸವದ ನಿಮಿತ್ತ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಇಂದಿನಿಂದ ಪ್ರಾರಂಭವಾಗುವ ಅಭಿಯಾನಕ್ಕೆ ಪ್ರಧಾನಿ ಮೋದಿ ಶುಭ ಕೋರಿದ್ದು, ಸರ್ಕಾರದ ಅಮೃತಮಹೋತ್ಸವದ ಸಂದರ್ಭದಲ್ಲಿ ಸರ್ವತೋಮುಖ ಅಭಿವೃದ್ಧಿ, ಸರ್ವಜನಾಂಗದ ಅಭಿವೃದ್ಧಿ ಮತ್ತು ಪಾರದರ್ಶಕ ಆಡಳಿತದತ್ತ ಸಾಗುತ್ತಿದ್ದೇವೆ ಎಂದಿದ್ದಾರೆ.

ದೆಹಲಿಯಲ್ಲಿ ಈ ಸಪ್ತಾಹದ ಉದ್ಘಾಟನೆ ನಡೆಯಲಿದ್ದು, ಆಡಳಿತ ಸುಧಾರಣೆಗಳು ಮತ್ತು ಸಾರ್ವಜನಿಕ ಕುಂದುಕೊರತೆಗಳ ಇಲಾಖೆಯ ಎರಡು ವರ್ಷಗಳ ಸಾಧನೆ ಮತ್ತು ಉತ್ತಮ ಆಡಳಿತ ಸಪ್ತಾಹದ ಪೋರ್ಟಲ್ ಇಂದು ಬಿಡುಗಡೆಯಾಗಲಿದೆ. ಕೇಂದ್ರ ಸಿಬ್ಬಂದಿ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಪೋರ್ಟಲ್ ಬಿಡುಗಡೆ ಮಾಡಲಿದ್ದಾರೆ. ‘ಪ್ರಶಾಸನ್ ಗಾಂವ್ ಕಿ ಓರ್’ ಈ ಬಾರಿಯ ಸಪ್ತಾಹದ ಥೀಮ್ ಆಗಿದ್ದು, ಈ ಕುರಿತ ಸಿನಿಮಾ ಬಿಡುಗಡೆ ಆಗಲಿದೆ. ಒಂದು ವಾರದ ಕಾರ್ಯಕ್ರಮದಲ್ಲಿ 700ಕ್ಕೂ ಹೆಚ್ಚು ಜಿಲ್ಲಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

Sneha Gowda

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

9 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

24 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

46 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

2 hours ago