ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌– ತುಟ್ಟಿಭತ್ಯೆ ಏರಿಕೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಬಂಪರ್‌ ಕೊಡುಗೆ ನೀಡಿದೆ. ಅವರ ತುಟ್ಟಿಭತ್ಯೆ ಯನ್ನು (ಡಿಎ ಮತ್ತು ಡಿಆರ್‌) ಶೇ 17ರಿಂದ ಶೇ 28ಕ್ಕೆ ಹೆಚ್ಚಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದರು.

ತುಟ್ಟಿಭತ್ಯೆ ಹೆಚ್ಚಳವು 2021ರ ಜುಲೈ 1ರಿಂದ ಅನ್ವಯವಾಗಲಿದ್ದು, ಕೇಂದ್ರ ಸರ್ಕಾರದ 48.34 ಲಕ್ಷ ನೌಕರರು ಹಾಗೂ 65.26 ಲಕ್ಷ ಪಿಂಚಣಿದಾರರು ಇದರ ಪ್ರಯೋಜನ ಪಡೆಯಲಿದ್ದಾರೆ.
ಈ ಹೆಚ್ಚಳದಿಂದಾಗಿ ಕೇಂದ್ರದ ಬೊಕ್ಕಸಕ್ಕೆ ₹ 34,401 ಕೋಟಿ ಹೊರೆ ಬೀಳಲಿದೆ ಎಂದು ಅವರು ಹೇಳಿದರು.

ಕೋವಿಡ್‌ ಕಾರಣದಿಂದ ಕೇಂದ್ರ ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಳವನ್ನು 2020ರ ಜನವರಿ 1ರಿಂದ ತಡೆ ಹಿಡಿಯಲಾಗಿತ್ತು. 2020ರ ಜನವರಿ 1, 2020ರ ಜುಲೈ 1 ಮತ್ತು 2021ರ ಜನವರಿ1ರ ಮೂರು ಕಂತುಗಳು ಬಾಕಿ ಆಗಿದ್ದವು. ಆದರೆ, ತಡೆ ಹಿಡಿದ ಅವಧಿಯ ಹಿಂಬಾಕಿ ಸಿಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

Sampriya YK

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago