Categories: ದೇಶ

ಕೇರಳದಲ್ಲಿ ಭಾರಿ ಮಳೆಯ ಮುನ್ಸೂಚನೆ– ಮುಂಬೈನಲ್ಲಿ ತಗ್ಗಿದ ಮಳೆ

ತಿರುವನಂತಪುರ: ಕೇರಳದ ಹಲವಾರು ಭಾಗಗಳಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದೆ. ಇಡುಕ್ಕಿ, ಎರ್ನಾಕುಲಂ, ಆಲಪ್ಪುಳ, ಕೊಟ್ಟಾಯಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಲಾಖೆಯ ಮುನ್ಸೂಚನೆ ಪ್ರಕಾರ, ತಿರುವನಂತಪುರ, ಇಡುಕ್ಕಿ, ಕೊಟ್ಟಾಯಂ, ಆಲಪ್ಪುಳ, ಎರ್ನಾಕುಲಂ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ, ಅದರಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಈವರೆಗೆ ಸುಮಾರು 100 ಜನರು ನಾಪತ್ತೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಅವಘಡಗಳಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾತಾರಾ ಜಿಲ್ಲೆಯಲ್ಲಿ ಭಾನುವಾರ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಭೂಕುಸಿತದ ನಂತರ ಕಾಣೆಯಾದವರಿಗಾಗಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.

Sampriya YK

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago