ಕೊರೋನಾ ಲಸಿಕೆ ಪಡೆಯದವರಿಗೆ : ‘ಹರ್ ಘರ್ ದಸ್ತಕ್’ ಅಭಿಯಾನದ ಮೂಲಕ ಮನೆಬಾಗಿಲಿಗೆ ವ್ಯಾಕ್ಸಿನ್

ನವದೆಹಲಿ: ದೇಶದಲ್ಲಿ 100 ಕೋಟಿ ಲಸಿಕೆ ನೀಡುವುದರೊಂದಿಗೆ ಸಾಧನೆ ಮಾಡಲಾಗಿದ್ದು, ಮುಂದಿನ ತಿಂಗಳಿನಿಂದ ಮನೆಮನೆಗೆ ತೆರಳಿ ಲಸಿಕೆ ನೀಡಲಾಗುವುದು. ‘ಹರ್ ಘರ್ ದಸ್ತಕ್’ ಅಭಿಯಾನಕ್ಕೆ ಚಾಲನೆ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಕೊರೋನಾ ಲಸಿಕೆ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಲು ಮುಂದಾಗಿದ್ದು, ಮುಂದಿನ ತಿಂಗಳಿನಿಂದ ಮನೆಬಾಗಿಲಿಗೆ ಲಸಿಕೆ ಪೂರೈಕೆ ಮಾಡಲಾಗುತ್ತದೆ.

ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ  ಕಡಿಮೆಯಾಗಿರುವುದರಿಂದ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರು ಬುಧವಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ದೇಶದಲ್ಲಿ ಶೇಕಡ 77 ರಷ್ಟು ಜನ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಶೇಕಡ 32 ರಷ್ಟು ಜನ ಮಾತ್ರ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಸುಮಾರು 10 ಕೋಟಿಗೂ ಅಧಿಕ ಮಂದಿ 2 ನೇ ಡೋಸ್ ಲಸಿಕೆಯನ್ನು ಪಡೆಯದ ಹಿನ್ನೆಲೆಯಲ್ಲಿ ‘ಹರ್ ಘರ್ ದಸ್ತಕ್’ ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುವುದು.

Swathi MG

Recent Posts

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

14 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

33 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

1 hour ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

1 hour ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 hours ago