ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ ಕೊರೋನಾ ನಿಯಂತ್ರ ಸಭೆಯನ್ನು ನಡೆಸಲಿದ್ದಾರೆ.
ಈ ಬಗ್ಗೆ ಪ್ರಧಾನಿ ಕಚೇರಿ ಮೂಲಗಳಿಂದ ಖಚಿತ ಮಾಹಿತಿ ನೀಡಿದ್ದು, ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಚರ್ಚಿಸಲಿದ್ದಾರೆ ಎಂದು ಹೇಳಿದೆ.