ನವದೆಹಲಿ: ಭಾರತದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ 28,204 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇದು ಕಳೆದ 147 ದಿನಗಳಲ್ಲೇ ದಾಖಲಾದ ಕನಿಷ್ಠ ಸಂಖ್ಯೆಯಾಗಿದೆ. ಇದೇ ಅವಧಿಯಲ್ಲಿ 373 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,19,98,158ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,28,628ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,88,508ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 41,511 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,11,80,968ಕ್ಕೆ ತಲುಪಿದೆ.