ನವದೆಹಲಿ: ಭಾರತದಲ್ಲಿ ಕೋವಿಡ್ ಅಬ್ಬರ ಮತ್ತಷ್ಟು ಇಳಿಮುಖವಾಗುತ್ತಿದೆ. ಮಂಗಳವಾರ 25,467 ಮಂದಿಯಲ್ಲಿ ಸೋಂಕು ಕಂಡು ಬಂದಿದೆ. ಇದು 156 ದಿನಗಳಲ್ಲೇ ಕನಿಷ್ಠ ಎನಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈ ನಡುವೆ 354 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,24,74,773ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,35,110ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,19,551ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 39,486 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,17,20,112ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 16,47,526 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 50,93,91,792 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.