Categories: ದೇಶ

ಕೋವಿಡ್‌: ದೇಶದಲ್ಲಿ 25,072 ಪ್ರಕರಣ, 389 ಸಾವು

ನವದೆಹಲಿ: ಭಾರತದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 389 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,24,49,306ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,34,756ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,33,924ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 44,157 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,16,80,626ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 12,95,160 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 50,75,51,399 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Sampriya YK

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

31 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

33 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

56 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago