ನವದೆಹಲಿ: ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,549 ಮಂದಿಗೆ ಕೋವಿಡ್ ಪತ್ತೆಯಾಗಿದೆ. ಇದೇ 422 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮಂಗವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,17,26,507ಕ್ಕೆ ತಲುಪಿದ್ದು, ಸಾವಿನ 4,25,195ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,04,958ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 38,887 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,08,96,354ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 16,49,295 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 47,12,94,789 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.