ನವದೆಹಲಿ: ಭಾರತದಲ್ಲಿ 24 ತಾಸುಗಳ ಅವಧಿಯಲ್ಲಿ 38,667 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಇದೇ ಅವಧಿಯಲ್ಲಿ 478 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,21,56,493ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,30,732ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,87,673ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 35,743 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,13,38,088ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 22,29,798 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 49,17,00,577 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.