ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 39,070 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಈ ಅವಧಿಯಲ್ಲಿ 491 ಸೋಂಕಿತರು ಮೃತಪಟ್ಟಿದ್ದಾರೆ. 43,910 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸತತ ಎರಡು ದಿನಗಳಿಂದ ದೈನಂದಿನ ಪ್ರಕರಣಗಳ ಸಂಖ್ಯೆ 40 ಸಾವಿರಕ್ಕಿಂತ ಕಡಿಮೆ ವರದಿಯಾದಂತಾಗಿದೆ. ಈವರೆಗೆ 3,19,34,455 ಮಂದಿ ಸೋಂಕಿತರಾಗಿದ್ದು, 4,27,862 ಸೋಂಕಿತರು ಮೃತಪಟ್ಟಿದ್ದಾರೆ. 3,10,99,771 ಸೋಂಕಿತರು ಚೇತರಿಸಿಕೊಂಡಿದ್ದಾರೆ.
ಸದ್ಯ ದೇಶದಲ್ಲಿ 4,06,822 ಸಕ್ರಿಯ ಪ್ರಕರಣಗಳಿವೆ ವಾರದ ವಾಸಿಟಿವಿಟಿ ದರ ಶೇ 2.38ರಷ್ಟಿದೆ. ಈವರೆಗೆ 50.68 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.