News Karnataka Kannada
Saturday, May 04 2024
ದೇಶ

ಕೋವಿಡ್‌: ದೇಶದಲ್ಲಿ 43,263 ಹೊಸ ಪ್ರಕರಣಗಳು

coivd 19
Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 43,263 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಇದೇ ಅವಧಿಯಲ್ಲಿ ಸೋಂಕಿನಿಂದ 40,567 ಜನ ಚೇತರಿಸಿಕೊಂಡಿದ್ದರೆ, 338 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 4,41,749ಕ್ಕೆ ಏರಿಕೆಯಾಗಿದೆ.

ಹೊಸ ಪ್ರಕರಣಗಳ ಸಂಖ್ಯೆ 24 ಗಂಟೆಗಳಲ್ಲಿ ಶೇ 14ರಷ್ಟು ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 3.31 ಕೋಟಿ ದಾಟಿದ್ದು, ಈ ಪೈಕಿ 3.23 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 3,93,614 ಪ್ರಕರಣಗಳು ಸಕ್ರಿಯವಾಗಿವೆ.

ಕೇರಳದಲ್ಲಿ ಬುಧವಾರ 30,196 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ ಮತ್ತು 181 ಮಂದಿ ಸಾವಿಗೀಡಾಗಿರುವುದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಇಳಿಮುಖವಾಗಿದ್ದ ಸೋಂಕು ಮತ್ತೆ ಸಾಂಕ್ರಾಮಿಕವಾಗಿರುವ ಲಕ್ಷಣಗಳು ಕಂಡು ಬಂದಿವೆ. ಅಲ್ಲಿ 4,174 ಹೊಸ ಪ್ರಕರಣಗಳು ಮತ್ತು 65 ಮಂದಿ ಮೃತಪಟ್ಟಿರುವುದು ವರದಿಯಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು