News Karnataka Kannada
Sunday, May 12 2024
ದೇಶ

ಕೋವಿಡ್‌: 5 ದಿನಗಳಿಂದ 40 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣ

Corona Main Newsk 5059978686
Photo Credit :

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್‌ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ, ಕಳೆದ 5 ದಿನಗಳಿಂದ 40 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.

ಕಳೆದ 24 ತಾಸುಗಳ ಅವಧಿಯಲ್ಲಿ 41,831 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 541 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,16,55,824ಕ್ಕೆ ತಲುಪಿದ್ದು, ಸಾವಿನ 4,23,758ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,10,952ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 39,258 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,08,20,521ಕ್ಕೆ ತಲುಪಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು