ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 34,973 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಅಂತೆಯೇ ಇದೇ ಅವಧಿಯಲ್ಲಿ 260 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 34,973 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,31,74,954ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 260 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್-19 ಸಾಂಕ್ರಾಮಿಕಕ್ಕೆ ಬಲಿಯಾದವರ ಸಂಖ್ಯೆ 4,42,009ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳ ಅವದಿಯಲ್ಲಿ ದೇಶದಲ್ಲಿ 37,681 ಮಂದಿ ಸೋಂಕಿತರು ಗುಣಮುಖರಾಗಿದ್ದು ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 3,23,42,299ಕ್ಕೆ ಏರಿಕೆಯಾದಂತಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 3,90,646 ಸಕ್ರಿಯ ಪ್ರಕರಣಗಳಿವೆ.