ದೇಶ

ಕೋವಿಡ್ ಮರಣಪತ್ರ: ಮಾರ್ಗಸೂಚಿ ಮರು ಪರಿಶೀಲನೆಗೆ ಸುಪ್ರೀಂ ಸಲಹೆ

ನವದೆಹಲಿ: ಕೋವಿಡ್‌ 19ನಿಂದಾಗಿ ಸಾವಿಗೀಡಾದ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ಉದ್ದೇಶದಿಂದ ನೀಡಲಾಗುವ ಮರಣಪತ್ರಗಳಲ್ಲಿ ಆತ್ಮಹತ್ಯೆಯಿಂದಾದ ಸಾವನ್ನು ಸೇರಿಸದಿರುವ ಕುರಿತ ತನ್ನ ಮಾರ್ಗಸೂಚಿಯನ್ನು ಮರುಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೋಮವಾರ ಸಲಹೆ ನೀಡಿದೆ.

ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಎ.ಎಸ್. ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠವು, ಕೋವಿಡ್‌ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೆ ಅಂಥವರಿಗೆ ಕೋವಿಡ್ ಮರಣಪತ್ರಗಳನ್ನು ನೀಡಲಾಗದು ಎಂದು ನೀವು ನಿರ್ದಿಷ್ಟವಾಗಿ ಹೇಳಿದ್ದೀರಿ. ಆದರೆ, ಇದನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಮೆಹ್ತಾ ಅವರು, ಸಾವಿನ ಕಾರಣ ಆತ್ಮಹತ್ಯೆ ಎಂದಾಗಿರುತ್ತದೆಯೇ ಹೊರತು ಕೋವಿಡ್ ಅಲ್ಲ ಎಂದರು. ಈ ಬಗ್ಗೆ ಕೇಂದ್ರ ಸರ್ಕಾರವು ಸಲ್ಲಿಸಿರುವ ಅಫಿಡವಿಟ್‌ ಮೇಲ್ನೋಟಕ್ಕೆ ಸರಿ ಎನಿಸುತ್ತದೆ. ಆದರೆ, ಕೊರೊನಾ ಪೀಡಿತರಾಗಿ ಅದರಿಂದಲೇ ಆತ್ಮಹತ್ಯೆ ಮಾಡಿಕೊಂಡವರ ಬಗ್ಗೆ ಏನೂ ಹೇಳಿಲ್ಲ ಎಂದೂ ಪೀಠವು ಪ್ರಶ್ನಿಸಿತು.

ಕೋವಿಡ್‌ನಿಂದಾಗಿ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಆತ್ಮಹತ್ಯೆ ಎನ್ನುವ ಕಾರಣಕ್ಕಾಗಿ ಅವರಿಗೆ ಪರಿಹಾರ ನೀಡದಿರುವುದು ಅಸಮಂಜಸ ಎಂದು ಪ್ರಶ್ನಿಸಿ ವಕೀಲರಾದ ರೀಪಕ್ ಕನ್ಸಲ್ ಮತ್ತು ಗೌರವ್ ಕುಮಾರ್ ಬನ್ಸಲ್ ಎಂಬುವರು ಅರ್ಜಿ ಸಲ್ಲಿಸಿದ್ದರು.

Sampriya YK

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

8 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

24 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

36 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago