ಟೋಕಿಯೋ ; ಒಲಿಂಪಿಕ್ಸನಲ್ಲಿ ಜಾವೆಲಿನ್ ಥ್ರೋ ಆಟದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಆಟಗಾರ ನೀರಜ್ ಚೋಪ್ರಾ ಅವರಿಗೆ ಮಹೀಂದ್ರಾ ಕಂಪನಿ ಮಾಲೀಕ ಆನಂದ್ ಮಹೀಂದ್ರಾ ಭರ್ಜರಿ ಉಡುಗೊರೆ ನೀಡಿದ್ದಾರೆ. ನೀರಜ್ ಛೋಪ್ರಾಗೆ XUV 700 ಕಾರು ಗಿಫ್ಟ್ ನೀಡುವುದಾಗಿ ಆನಂದ್ ಮಹೀಂದ್ರಾ ಘೋಷಿಸಿದ್ದಾರೆ. ಭಾರತೀಯ ಕ್ರೀಡಾಪಟುಗಳು ಯಾವುದೇ ಮಹತ್ತರ ಸಾಧನೆ ಮಾಡಿದಲ್ಲಿ ಉಡುಗೊರೆ ಘೋಷಿಸುವ ಆನಂದ್ ಮಹೀಂದ್ರಾ ನೀರಜ್ ಚೋಪ್ರಾಗೂ ಕೊಡುಗೆ ನೀಡಿದ್ದಾರೆ.
ಅಥ್ಲೆಟಿಕ್ಸ್ನಲ್ಲಿ ಭಾರತಕ್ಕೆ ಮೊದಲ ಒಲಿಂಪಿಕ್ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಹರಿಯಾಣ ಸರ್ಕಾರ ನಗದು ಬಹುಮಾನವನ್ನು ಘೋಷಿಸಿತು. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಒಲಿಂಪಿಕ್ಸ್ನಲ್ಲಿ ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ಚೋಪ್ರಾ ಅವರಿಗೆ 6 ಕೋಟಿ ರೂ. ನಗದು ಬಹುಮಾನ ಘೋಷಿಸಿದ್ದಾರೆ.
ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಮಹೀಂದ್ರಾ XUV ಗಿಫ್ಟ್ ಪ್ರಕಟಿಸಿದ ಆನಂದ್ ಮಹೀಂದ್ರಾ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.