Categories: ದೇಶ

ಚಿನ್ನ ಗೆದ್ದ ನೀರಜ್‌ ಚೋಪ್ರಾ ರಾಷ್ಟ್ರ ಗೀತೆ ವೇಳೆ ಕಣ್ಣೀರು

ಟೋಕಿಯೋ: ಜಾವಲಿನ್ ಎಸೆತದಲ್ಲಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟ ನೀರಜ್ ಚೋಪ್ರಾ ಭಾವುಕರಾಗಿದ್ದು, ಚಿನ್ನದ ಪದಕ ಸ್ವೀಕರಿಸಿದ ಬಳಿಕ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟಿದ್ದಾರೆ. ಅಲ್ಲದೆ ಗೆದ್ದ ಪದಕವನ್ನು ಮಿಲ್ಕಾ ಸಿಂಗ್‍ಗೆ ಸಮರ್ಪಿಸುವುದಾಗಿ ತಿಳಿಸಿದ್ದಾರೆ.
ಶನಿವಾರ ನೀರಜ್ ಚೋಪ್ರಾ ಅವರು ಜಾವಲಿನ್ ಎಸೆತದಲ್ಲಿ ಚಿನ್ನದ ಪದಕ ತಂದುಕೊಡುವ ಮೂಲಕ ಭಾರತಕ್ಕೆ 7ನೇ ಸ್ವರ್ಣ ಪದಕವನ್ನು ಭಾರತಾಂಬೆಯ ಮುಡಿಗೇರಿಸಿದ್ದಾರೆ. ತಮ್ಮ ಸಾಧನೆ ಬಳಿಕ ನೀರಜ್ ಚೋಪ್ರಾ ಮಾಧ್ಯಮದವರ ಜೊತೆಗೆ ಮಾತನಾಡಿದ್ದು, ನಾನು ಚಿನ್ನದ ಪದಕದ ಬಗ್ಗೆ ಚಿಂತಿಸಿರಲಿಲ್ಲ. ನಾನು ಒಲಿಂಪಿಕ್ ದಾಖಲೆಯನ್ನು ಮುರಿಯಲು ಬಯಸಿದ್ದೆ, ಹೀಗಾಗಿ ಇದು ಸಾಧ್ಯವಾಗಿದೆ. ಈ ದಿನ ವಿಶೇಷವಾಗಿ ಏನಾದರೂ ಮಾಡಲು ಬಯಸಿದ್ದೇನೆ ಎಂದಿದ್ದಾರೆ.
ನನ್ನ ಗೋಲ್ಡ್ ಮೆಡಲ್ ನ್ನು ಮಿಲ್ಕಾ ಸಿಂಗ್ ಅವರಿಗೆ ಸಮರ್ಪಿಸುತ್ತೇನೆ. ಅಲ್ಲದೆ ಗೋಲ್ಡ್ ಮೆಡಲ್ ಜೊತೆ ವೈಯಕ್ತಿಕವಾಗಿ ಅವರನ್ನು ಭೇಟಿಯಾಗಲು ಬಯಸಿದ್ದೆ. ಪಿ.ಟಿ.ಉಷಾ ಹಾಗೂ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಸಮೀಪಕ್ಕೆ ಬಂದ ಇತರ ಭಾರತೀಯ ಕ್ರೀಡಾಪಟುಗಳಿಗೆ ಈ ಚಿನ್ನದ ಪದಕವನ್ನು ಅರ್ಪಿಸುತ್ತೇನೆ. ಪದಕ ನೀಡುವ ಸಮಾರಂಭದ ಸಂದರ್ಭದಲ್ಲಿ ರಾಷ್ಟ್ರಗೀತೆ ನನಗೆ ಪ್ರಪಂಚವೇ ಕಣ್ಣ ಮುಂದೆ ಬಂತು. ಅಲ್ಲದೆ ತುಂಬಾ ಅಳು ಬಂತು ಎಂದು ಹೇಳಿದ್ದಾರೆ.

Indresh KC

Recent Posts

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

4 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

6 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

26 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

37 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

47 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago