ದೇಶ

ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಎನ್ಕೌಂಟರ್

ಸೊಪೋರ್: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಸೊಪೋರ್ ನ ಪೆತ್ಸೀರ್ ಎಂಬಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನಿಟ್ಟುಕೊಂಡಿರುವ ಉಗ್ರರು ಅಡಗಿ ಕುಳಿತಿದ್ದಾರೆಂಬ ಮಾಹಿತಿ ಸೇನಾಪಡೆಗಳಿಗೆ ತಿಳಿದುಬಂದಿತ್ತು.

ಕೂಡಲೇ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿ ಸ್ಥಳವನ್ನು ಸುತ್ತುವರೆದ ಯೋಧರು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಸ್ಥಳದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನು ಸೇನಾಪಡೆಗಳು ವಶಕ್ಕೆ ಪಡೆದಿದ್ದು, ಹತ್ಯೆಯಾದ ಉಗ್ರರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ.

Sneha Gowda

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

25 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

48 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 hour ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

2 hours ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago