News Karnataka Kannada
Friday, May 03 2024
ದೇಶ

ಜೈಪುರ: ಸಿಡಿಲು ಬಡಿದು 11 ಮಂದಿ ದಾರುಣ ಸಾವು

Jaipur 12072021
Photo Credit :

ಜೈಪುರ: ಇಲ್ಲಿನ ಅಮೆರ್ ಪ್ಯಾಲೇಸ್‌ನಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು 11 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಅಮೆರ್‌ ಪ್ಯಾಲೆಸ್‌ನ ವಾಚ್‌ ಟವರ್‌ ಮೇಲೆ ಜನರು ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದಿದೆ. ಕೆಲವರು ಸಿಡಿಲಿನ ಭಯಕ್ಕೆ ವಾಚ್‌ ಟವರ್‌ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ.

ಸಿಡಿಲು ಬಡಿದಾಗ ವಾಚ್‌ ಟವರ್‌ ಮೇಲೆ 25ಕ್ಕೂ ಅಧಿಕ ಮಂದಿ ಇದ್ದರು. ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ದುರ್ಘಟನೆಗೆ ಸಂತಾಪ ಸೂಚಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು