Categories: ದೇಶ

ಝೈಕೋವ್-ಡಿ ಲಸಿಕೆ : 12-17 ವರ್ಷದೊಳಗಿನ ಮಕ್ಕಳಿಗೆ ನೀಡಲು ನಿರ್ಧರಿ

ಈ ತಿಂಗಳ ಅಂತ್ಯದೊಳಗೆ ಝೈಡಸ್ ಕ್ಯಾಡಿಲಾ ಸಂಸ್ಥೆಯ ಕೊರೋನಾ ಲಸಿಕೆಯ ಬರೋಬ್ಬರಿ 1 ಕೋಟಿ ಡೋಸ್ ಗುಣಮಟ್ಟ ಪರೀಕ್ಷೆಗೆ ಸಿದ್ದವಾಗಿದೆ ಎಂದು ವರದಿ ತಿಳಿಸಿದೆ. ಝೈಡಸ್ ಕ್ಯಾಡಿಲಾದ 1 ಕೋಟಿ ಲಸಿಕೆಯನ್ನು ಕಸೌಲಿಯ ಕೇಂದ್ರ ಔಷಧ ಪ್ರಯೋಗಾಲಯದಲ್ಲಿ ಗುಣಮಟ್ಟ ಪರೀಕ್ಷೆ ನಡೆಸಲಾಗುತ್ತದೆ.

ಈ ಲಸಿಕೆಯನ್ನು 12-17 ವರ್ಷದೊಳಗಿನ ಮಕ್ಕಳಿಗೆ ನೀಡಲು ನಿರ್ಧರಿಸಲಾಗಿದ್ದು, ತಜ್ಞರಿಂದ ಸೂಕ್ತ ಮಾರ್ಗಸೂಚಿ ಪಡೆಯಬೇಕಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದೆ. ಝೈಕೋವ್-ಡಿ ಲಸಿಕೆಯು ವಿಶ್ವದ ಮೊದಲ ಡಿಎನ್’ಎ ಲಸಿಕೆಯಾಗಿದ್ದು, ಮೂರು ಡೋಸ್ ಲಸಿಕೆ ಪಡೆಯಬೇಕಾಗುತ್ತದೆ. ಮೊದಲ ಡೋಸ್ ಬಳಿಕ 28ನೇ ದಿನ ಎರಡನೇ ಡೋಸ್ ಹಾಗೂ 56ನೇ ದಿನದಂದು ಮೂರನೇ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು.

ಲಸಿಕೆಯ ಬೆಲೆ ಕುರಿತು ಈಗಷ್ಟೆ ಚರ್ಚೆ ಪ್ರಾರಂಭವಾಗಿದ್ದು, ಶೀಘ್ರದಲ್ಲಿ ಸೂಕ್ತ ನಿರ್ಧರ ಕೈಗೊಳ್ಳಲಾಗುತ್ತದೆ. ಈ ಲಸಿಕೆಯನ್ನು ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಲ್ಲಿ ಸೇರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪಾಲ್ ತಿಳಿಸಿದ್ದಾರೆ.

Sneha Gowda

Recent Posts

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

18 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

44 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

57 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago