ದೇಶ

ಡಿ. 13ರಂದು ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಬಳಸಿದ ಶಸ್ತ್ರಾಸ್ತ್ರಗಳ ಪ್ರದರ್ಶನ

ಹೊಸದಿಲ್ಲಿ: ಐವತ್ತು ವರ್ಷಗಳ ಹಿಂದೆ ನಡೆದ ಬಾಂಗ್ಲಾ ವಿಮೋಚನಾ ಯುದ್ಧದ ವೇಳೆ ಈಗಿನ ಪೀಳಿಗೆ ಇರಲಿಲ್ಲ. ಆದರೆ ಆ ಯುದ್ಧದಲ್ಲಿ ಭಾರತ ಬಳಸಿದ ಪ್ರಮುಖ ಶಸ್ತ್ರಾಸ್ತ್ರಗಳು ಮತ್ತು ಉಪಕರಣಗಳು ಹಾಗೂ ಯುದ್ಧದ ಪ್ರಮುಖ ತುಣುಕುಗಳನ್ನು ನೋಡುವ ಅವಕಾಶ.

ಈ ವರ್ಷ 1971ರ ಭಾರತ ಪಾಕಿಸ್ತಾನ ಯುದ್ಧದಲ್ಲಿ ಭಾರತದ ಐತಿಹಾಸಿಕ ವಿಜಯ ಮತ್ತು ಇಂಡೋ-ಬಾಂಗ್ಲಾದೇಶದ ಸ್ನೇಹದ ಸುವರ್ಣ ವರ್ಷ ಆಚರಿಸಲಾಗುತ್ತಿದೆ. ಈ 50 ವರ್ಷಗಳ ಸ್ಮರಣಾರ್ಥವಾಗಿ ಡಿ. 12 ಮತ್ತು 13ರಂದು ಹೊಸದಿಲ್ಲಿಯ ಇಂಡಿಯಾ ಗೇಟ್‌ನಲ್ಲಿ ‘ಸ್ವರ್ಣಿಮ್ ವಿಜಯ್ ಪರ್ವ್’ ಆಯೋಜಿಸಲಾಗಿದೆ.

ಇದರಲ್ಲಿ 1971 ರ ಯುದ್ಧದ ಸಮಯದಲ್ಲಿ ಬಳಸಿದ ಪ್ರಮುಖ ಶಸ್ತ್ರಾಸ್ತ್ರಗಳು ಮತ್ತು ಉಪಕರಣಗಳನ್ನು ಹಾಗೂ ಪ್ರಮುಖ ಯುದ್ಧಗಳ ತುಣುಕುಗಳೊಂದಿಗೆ ಪ್ರದರ್ಶಿಸಲಾಗುತ್ತದೆ.

ಕಾರ್ಯಕ್ರಮವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ. ಉದ್ಘಾಟನೆಯ ನಂತರ ಈ ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿರುತ್ತದೆ.

ಸಮಾರೋಪ ಸಮಾರಂಭವು ಡಿ. 13ರಂದು ನಡೆಯಲಿದೆ. ಇದರಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಜೊತೆಗೆ ಬಾಂಗ್ಲಾದೇಶದಿಂದ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

Sneha Gowda

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

21 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

31 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

36 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

44 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

53 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

57 mins ago