News Karnataka Kannada
Friday, May 03 2024
ದೇಶ

ಡ್ರಗ್ಸ್ ಪಾರ್ಟಿ: ತನಿಖೆ ಮೇಲಿನ ಆರೋಪಗಳು ಆಧಾರ ರಹಿತ ಎಂದ ಎನ್‌ಸಿಬಿ

Ncb
Photo Credit :

ಮುಂಬೈ : ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಆರೋಪಿಗಳನ್ನು ಬಂಧಿಸಲಾಗಿದೆ. ಪಾರದರ್ಶಕವಾಗಿ ಪ್ರಕರಣದ ತನಿಖೆ ಮಾಡಲಾಗುತ್ತಿದೆ. ನಮ್ಮ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಎಂದು ಎನ್.ಸಿ.ಬಿ. ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಎನ್.ಸಿ.ಬಿ. ವಿರುದ್ಧ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಹೊರಿಸಿದ ಆರೋಪಗಳಿಗೆ ಸ್ಪಷ್ಟನೆ ನೀಡಿದರು.

ತಮ್ಮ ಮೇಲೆ ಹೊರಿಸಿದ ಆರೋಪಗಳು ಆಧಾರ ರಹಿತವಾಗಿದ್ದು, ದುರುದ್ದೇಶದಿಂದ ಕೂಡಿದೆ. ಇದು ಎನ್.ಸಿ.ಬಿ. ನಡೆಸಿದ ಕಾನೂನು ಕ್ರಮದ ವಿರುದ್ಧ ಪ್ರತೀಕಾರವಾಗಿರಬಹುದು ಎಂದು ಎನ್‌ಸಿಬಿ ಡೆಪ್ಯುಟಿ ಡಿಜಿ ಜ್ಞಾನೇಶ್ವರ್ ಸಿಂಗ್ ತಿಳಿಸಿದ್ದಾರೆ.

ನಮ್ಮ ಕಾರ್ಯವಿಧಾನವು ವೃತ್ತಿಪರವಾಗಿ, ಕಾನೂನುಬದ್ಧವಾಗಿದೆ. ಪಾರದರ್ಶಕ ಮತ್ತು ಪಕ್ಷಪಾತವಿಲ್ಲದೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು