ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಅವರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಳ ಭಾನುವಾರ ಬಂಧಿಸಿದೆ.
ಅರ್ಮಾನ್ ಕೊಹ್ಲಿ ಅವರನ್ನು ಎನ್ಸಿಬಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದೆ ಎಂದು ‘ಎಎನ್ಐ’ ವರದಿ ಮಾಡಿದೆ.
ಅರ್ಮಾನ್ ಕೊಹ್ಲಿ ಅವರ ಮುಂಬೈ ನಿವಾಸದ ಮೇಲೆ ಶನಿವಾರ ಸಂಜೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಶುಕ್ರವಾರ ಕಿರುತೆರೆ ನಟ ಗೌರವ್ ದೀಕ್ಷಿತ್ ಅವರನ್ನು ಕೇಂದ್ರ ಮಾದಕ ವಸ್ತು ನಿಯಂತ್ರಣ ದಳ ಬಂಧಿಸಿತ್ತು. ಇದರ ಮುಂದುವರಿದ ಭಾಗವಾಗಿ ಅರ್ಮಾನ್ ಕೊಹ್ಲಿ ಅವರ ನಿವಾಸದ ಮೇಲೆ ದಾಳಿ ನಡೆದಿತ್ತು ಎಂದು ತಿಳಿದುಬಂದಿದೆ.