ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 12,729 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 12,729 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 221 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ .
ಕಳೆದ 24 ಗಂಟೆಗಳಲ್ಲಿ ದೇಶದಲ್ಲ ಕೊರೊನಾ ಸೋಂಕಿನಿಂದ 12,165 ಜನರು ಚೇತರಿಸಿಕೊಂಡಿದ್ದು, ಈ ಮೂಲಕ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 3,37,24,959 ಕ್ಕೆ ತಲುಪಿದೆ. ದೇಶದಲ್ಲಿ ಕೊರೊನಾ ವೈರಸ್ ಹೊಂದಿರುವ ಸಕ್ರಿಯ ರೋಗಿಗಳು ಈಗ 1.48 ಲಕ್ಷಕ್ಕೆ ಇಳಿದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.