News Karnataka Kannada
Monday, April 29 2024
ದೇಶ

ದೇಶದಲ್ಲಿ ಈವರೆಗೆ ನೀಡಲಾಗಿರುವ ಲಸಿಕೆ ಎಷ್ಟು ಗೊತ್ತಾ ?

Ita Covid19 Mng 06082021
Photo Credit :

ನವದೆಹಲಿ, ; ದೇಶದಲ್ಲಿ ಕೊರೊನಾ ಸೋಂಕಿಗೆ ಉಚಿತವಾಗಿ ಲಸಿಕೆ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ಹೊಸ ದಾಖಲೆ ಬರೆದಿದೆ. ಜೂನ್ 21 ರಿಂದ ಆರಂಭವಾದ ಉಚಿತ ಲಸಿಕೆ ನೀಡಿಕೆ ಅಭಿಯಾನ ಇಲ್ಲಿಯತನಕ 26.8 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಜೂನ್ 21 ರಿಂದ 18 ವರ್ಷ ದಾಟಿದ ಎಲ್ಲಾ ವಯೋಮಾನದವರಿಗೆ ಉಚಿತವಾಗಿ ಲಸಿಕೆ ನೀಡುವ ಅಭಿಯಾನವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ ದಿನದಿಂದ ಇಲ್ಲಿಯತನಕ ದಾಖಲೆಯ ಪ್ರಮಾಣದಲ್ಲಿ ಉಚಿತವಾಗಿ ಲಸಿಕೆ ನೀಡಲಾಗಿದೆ ಎಂದು ತಿಳಿಸಲಾಗಿದೆ.ಜೂನ್ 21ರಿಂದ ಆಗಸ್ಟ್ 19ರ ತನಕ ದೇಶದಲ್ಲಿ ಉಚಿತವಾಗಿ 26.8 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಜಗತ್ತಿನ ವಿವಿಧ ದೇಶಗಳಿಗೆ ಹೋಲಿಸಿದರೆ ಅತಿ ಕಡಿಮೆ ಸಮಯದಲ್ಲಿ ಹೆಚ್ಚು ಜನರಿಗೆ ಉಚಿತವಾಗಿ ಲಸಿಕೆ ನೀಡಿದ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಉಚಿತ ಲಸಿಕೆ ನೀಡಿಕೆ ಅಭಿಯಾನ ಆರಂಭವಾದ 59 ದಿನಗಳಲ್ಲಿ 26 ಕೋಟಿಗೂ ಹೆಚ್ಚು ಜನರಿಗೆ ಉಚಿತವಾಗಿ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಲಾಗಿದೆ ಎಂದು ಹೇಳಿದೆ.ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ 18 ವರ್ಷ ದಾಟಿದ ಎಲ್ಲಾ ಅರ್ಹ ನಾಗರಿಕರಿಗೆ ಲಸಿಕೆ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಅದಕ್ಕೆ ಪೂರ್ವಕವಾಗಿ ದಿನದಿಂದ ದಿನಕ್ಕೆ ಲಸಿಕೆ ನೀಡಿಕೆ ಪ್ರಮಾಣವನ್ನು ಹೆಚ್ಚು ಮಾಡಲಾಗುತ್ತದೆ ಎಂದು ತಿಳಿಸಿದೆ. ಜನವರಿ 16 ರಿಂದ ಆರಂಭವಾದ ಲಸಿಕೆ ನೀಡಿಕೆ ಅಭಿಯಾನದಲ್ಲಿ ಇಲ್ಲಿಯತನಕ ಉಚಿತ ಲಸಿಕೆ ನೀಡಿದಂತೆ ಒಟ್ಟಾರೆಯಾಗಿ 56.64 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು