Categories: ದೇಶ

ದೇಶದಲ್ಲಿ ‘ಒಮಿಕ್ರಾನ್​​’ ಭೀತಿ: ಅಪಾಯದಲ್ಲಿರುವ ದೇಶಗಳ ಮೇಲೆ ಹದ್ದಿನ ಕಣ್ಣಿಡಲು ಪ್ರಧಾನಿ ಮೋದಿ ಸೂಚನೆ

ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡ ಹೊಸ ರೂಪಾಂತರ ಕೊರೋನಾ ತಳಿ ‘ಒಮಿಕ್ರಾನ್​​ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ ನಡೆಯಿತು.

ಈ ವೇಳೆ ಪ್ರಧಾನಿ ಮೋದಿ ಲಸಿಕೆ ಅಭಿಯಾನ ಹಾಗೂ ಹೊಸ ತಳಿ ಕುರಿತಾಗಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ಈ ವೇಳೆ ಪ್ರಧಾನಿ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಈಗಾಗಲೇ ವಿದೇಶಿ ಪ್ರಯಾಣಿಕರಿಗೆ ನೀಡಿರುವ ಸಡಲಿಕೆ ಬಗ್ಗೆ ಮತ್ತೊಂದು ಸಲ ಮರುಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ಹೊಸ ರೂಪಾಂತರಿ ತಡೆಗಟ್ಟಲು ಪೂರ್ವಭಾವಿಯಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಮೋದಿ ಮಾತನಾಡಿದ್ದು, ಹೊಸ ಸೋಂಕು ಗಮನದಲ್ಲಿಟ್ಟುಕೊಂಡು ಜನರು ಮತ್ತಷ್ಟು ಜಾಗರೂಕರಾಗುವಂತೆ ಸೂಚನೆ ನೀಡುವಂತೆ ತಿಳಿಸಿದ್ದಾರೆ.
ಮಾಸ್ಕ್​, ಸಾಮಾಜಿಕ ಅಂತರ ಹಾಗೂ ಕೋವಿಡ್​ ಮಾರ್ಗಸೂಚಿ ಪಾಲಿಸುವಂತೆ ಮನವಿ ಮಾಡಿದ್ದಾರೆ.

ಸಭೆಯಲ್ಲಿ ಭಾಗಿಯಾಗಿದ್ದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ವೈರಸ್ ಬಗ್ಗೆ ಮಾಹಿತಿ ನೀಡಿದ್ದು, ದಕ್ಷಿಣ ಆಫ್ರಿಕಾ, ಬೋಟ್ಸವನಾದಲ್ಲಿ ಪತ್ತೆಯಾಗಿರುವ ರೂಪಾಂತರಿ ಬಗ್ಗೆ ಮಾಹಿತಿ ನೀಡಿದ್ದು, ಇದರಿಂದ ಭಾರತಕ್ಕಿರುವ ಅಪಾಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಹೊಸ ಸೋಂಕಿನಿಂದ ಈಗಾಗಲೇ ಅಪಾಯದಲ್ಲಿರುವ ದೇಶಗಳ ಮೇಲೆ ಹದ್ದಿನ ಕಣ್ಣಿಡಲು ಕೇಂದ್ರ ಆರೋಗ್ಯ ಇಲಾಖೆಗೆ ಸೂಚಿಸಿರುವ ಪ್ರಧಾನಿ, ಅಲ್ಲಿಂದ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡುವಂತೆ ಸೂಚಿಸಿದ್ದಾರೆ.

ಅದೇ ರೀತಿ ರಾಜ್ಯ ಸರ್ಕಾರದೊಂದಿಗೆ ನಿಟಕ ಸಂಪರ್ಕ ಹಾಗೂ ಸರಿಯಾದ ಮಾಹಿತಿ ನೀಡಲು ಸೂಚಿಸಿದ್ದು, ಎರಡನೇ ಡೋಸ್​ ಕೋವಿಡ್ ಲಸಿಕೆ ವೇಗ ಮತ್ತಷ್ಟು ಹೆಚ್ಚಿಸಲು ಸೂಚಿಸಿದ್ದಾರೆ.

ಸಭೆಯಲ್ಲಿ ಕ್ಯಾಬಿನೆಟ್​ ಕಾರ್ಯದರ್ಶಿ ರಾಜೀವ್​ ಗೌಬಾ, ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ನೀತಿ ಆಯೋಗದ ಸದಸ್ಯರಾದ ಡಾ. ವಿ.ಕೆ ಪಾಲ್​ ಸೇರಿ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

5 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

26 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

50 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

2 hours ago