ನವದೆಹಲಿ: ದೇಶದಲ್ಲಿ ಕನಿಷ್ಠ ಶೇ. 66 ರಷ್ಟು ವಯಸ್ಕರಿಗೆ ಮೊದಲ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಮತ್ತು ಶೇ, 23 ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.
ಗ್ರಾಮೀಣ ಪ್ರದೇಶಗಳಲ್ಲಿನ ಕೇಂದ್ರಗಳಲ್ಲಿ ಶೇಕಡಾ 63.7 ರಷ್ಟು ಕೋವಿಡ್ ಲಸಿಕೆ ನೀಡಲಾಗಿದೆ ಮತ್ತು ನಗರ ಪ್ರದೇಶಗಳಲ್ಲಿ ಶೇಕಡ 35.4 ರಷ್ಟು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ತಿಳಿಸಿದೆ.
ಗ್ರಾಮೀಣ ಅಥವಾ ನಗರ ಪ್ರದೇಶದ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಒಟ್ಟು 68.2 ಲಕ್ಷ ಡೋಸ್ (ಸರಿಸುಮಾರು 0.95 ಶೇಕಡಾ) ಲಸಿಕೆ ನೀಡಿದ ಬಗ್ಗೆ ಯಾವುದೇ ಟ್ಯಾಗ್ ಮಾಡಲಾಗಿಲ್ಲ ಎಂದು ಅವರು ಆರೋಗ್ಯ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.