ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು,, ಕಳೆದ 24 ಗಂಟೆಯಲ್ಲಿ 23,529 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 3,37,39,980ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 28,718 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,30,14,898ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,77,020 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 311 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,48,062 ಏರಿಕೆಯಾಗಿದೆ.