ನವದೆಹಲಿ: ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,941 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 350 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,26,95,030ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,37,830ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 3,27,68,880ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,38,560ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,70,640ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 36,275 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,19,59,680ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 13,94,573 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 52,15,41,098 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.