News Karnataka Kannada
Wednesday, May 08 2024
ದೇಶ

ದೇಶದಲ್ಲಿ ಕೋವಿಡ್‌ ಪ್ರಕರಣ ಕೊಂಚ ಇಳಿಮುಖ

coivd 19
Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ 38,948 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 219 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೃಢಪಡಿಸಿದೆ.

ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,30,27,621ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,40,752ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,04,874ರಲ್ಲಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ವರದಿಯಾದ 38,948 ಹೊಸ ಪ್ರಕರಣಗಳು ಮತ್ತು 219 ಸಾವುಗಳಲ್ಲಿ, ಕೇರಳ ರಾಜ್ಯದಲ್ಲಿ 26,701 ಪ್ರಕರಣಗಳು ಮತ್ತು 74 ಸಾವುಗಳನ್ನು ಕಂಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 43 ಸಾವಿರದ 903 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,21,81,995ಕ್ಕೆ ತಲುಪಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು