News Karnataka Kannada
Saturday, May 04 2024
ದೇಶ

ದೇಶದಲ್ಲಿ ಕೋವಿಡ್‌ ಪ್ರಕರಣ ಕೊಂಚ ಇಳಿಮುಖ

coivd 19
Photo Credit :

ನವದೆಹಲಿ: ಭಾರತದಲ್ಲಿ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌–19 ದೃಢಪಟ್ಟ 25,166 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದು ಕಳೆದ 154 ದಿನಗಳಲ್ಲೇ ಕನಿಷ್ಠ ಪ್ರಕರಣಗಳಾಗಿವೆ. ಇದೇ ಅವಧಿಯಲ್ಲಿ 36,830 ಮಂದಿ ಗುಣಮುಖರಾಗಿದ್ದು, 437 ಜನ ಸಾವಿಗೀಡಾಗಿದ್ದಾರೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 146 ದಿನಗಳ ಕನಿಷ್ಠ, 3,69,846 ತಲುಪಿದೆ ಹಾಗೂ ಚೇತರಿಕೆ ಪ್ರಮಾಣ ಶೇ.97.51ರಷ್ಟಿದೆ.

ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 3.22 ಕೋಟಿಗೆ ಏರಿಕೆಯಾಗಿದ್ದು, ಈ ಪೈಕಿ 3.14 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಕೋವಿಡ್‌ ಕಾರಣಗಳಿಂದಾಗಿ ಈವರೆಗೂ 4,32,079 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ದೇಶದಾದ್ಯಂತ 55.47 ಕೋಟಿಗೂ ಅಧಿಕ ಡೋಸ್‌ ಕೋವಿಡ್‌–19 ಲಸಿಕೆ ಹಾಕಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 56.81 ಕೋಟಿಗೂ ಹೆಚ್ಚು ಡೋಸ್‌ ಲಸಿಕೆ ಹಂಚಿಕೆಯಾಗಿದ್ದು, ಅವುಗಳಲ್ಲಿ 2.25 ಕೋಟಿಗೂ ಅಧಿಕ ಡೋಸ್‌ ಲಸಿಕೆ ಬಳಕೆಯಾಗದೆ ಉಳಿದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು