ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,37,704 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಇಲಾಖೆ, ದೇಶದಲ್ಲಿ 3,37,704 ಮಂದಿಗೆ ಕೋವಿಡ್ ತಗುಲಿದ್ದು, ಈ ಮೂಲಕ ಪಾಸಿಟಿವಿಟಿ ದರ ಕೂಡ ಶೇ.17.22ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 21,13,365 ಸಕ್ರಿಯ ಸೋಂಕಿತರಿದ್ದಾರೆ.
ನಿನ್ನೆ 2,42,676 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಒಟ್ಟು 3,63,01,468 ಮಂದಿ ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿ ಕೋವಿಡ್ ರೂಪಾಂತರಿ ಸೋಂಕು ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ 10,050ಕ್ಕೆ ಏರಿಕೆಯಾಗಿದೆ.