ದೇಶ

ದೇಶದಲ್ಲಿ ಡ್ರೋನ್‌ ಉದ್ಯಮ ಪ್ರೋತ್ಸಾಹಕ್ಕೆ ನಿಯಮ ಸರಳೀಕರಿಸಿದ ಸರ್ಕಾರ

ನವದೆಹಲಿ, ; ದೇಶದಲ್ಲಿ ಡ್ರೋಣ್ ಉದ್ಯಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ ಸಾಕಷ್ಟು ಸರಳೀಕರಣ ಮಾಡಲಾಗಿದ್ದು, ಇನ್ನೂ ಮುಂದೆ ಐದು ಅರ್ಜಿ ನಮೂನೆಗಳು ಹಾಗೂ ನಾಲ್ಕು ರೀತಿಯ ಶುಲ್ಕವನ್ನು ವಿಧಿಸಲಾಗಿದೆ. ಡ್ರೋಣ್ ನಿಯಮಾವಳಿ 2021ರನ್ನು ಕೇಂದ್ರ ಸರ್ಕಾರದ ನಾಗರೀಕ ವಿಮಾನಯಾನ ಸಚಿವಾಲಯ ಪರಿಷ್ಕರಣೆ ಮಾಡಿ, ಮೊದಲಿನ ನಿಯಮಗಳನ್ನು ಸರಳೀಕರಿಸಿದೆ.
ದೇಶದ ಒಳಗೆ ಡ್ರೋಣ್ ಬಳಕೆ ಮಾಡಲು ಈ ಮೊದಲು 25 ಅರ್ಜಿ ನಮೂನೆಯಲ್ಲಿ ಮಾಹಿತಿ ನೀಡಬೇಕಿತ್ತು, ಅದನ್ನು ಐದಕ್ಕೆ ಇಳಿಸಲಾಗಿದೆ. ಸುಮಾರು 74 ಮಾದರಿಯ ದಂಡಗಳನ್ನು ನಾಲ್ಕಕ್ಕೆ ಇಳಿಸಲಾಗಿದೆ. ಡ್ರೋಣ್ ನಿಯಮಾವಳಿಗಳು ಈ ವರ್ಷದ ಮಾ.12ರಿಂದ ಜಾರಿಗೆ ಬಂದಿವೆ. ಡ್ರೋಣ್‍ಗಳ ಗಾತ್ರದ ಮೇಲೆ ಶುಲ್ಕವನ್ನು ನಿಗದಿ ಮಾಡಲಾಗಿದೆ. ಹಸಿರು ವಲಯದಲ್ಲಿ 400 ಅಡಿವರೆಗೂ ಡ್ರೋಣ್ ಹಾರಾಟಕ್ಕೆ ಯಾವುದೇ ಅನುಮತಿ ಬೇಕಿಲ್ಲ. ವಿಮಾನನಿಲ್ದಾಣದಿಂದ 8ರಿಂದ 12 ಕಿಲೋ ಮೀಟರ್ ಅಂತರದಲ್ಲಿ 200 ಅಡಿ ಎತ್ತರದವರೆಗೂ ಡ್ರೋಣ್ ಹಾರಾಟಕ್ಕೆ ಅವಕಾಶ ನೀಡಲಾಗಿದೆ. ದಂಡದ ಪ್ರಮಾಣವನ್ನು ಒಂದು ಲಕ್ಷ ರೂಪಾಯಿ ಒಳಗೆ ಮಿತಿಗೊಳಿಸಲಾಗಿದೆ. ಮೈಕ್ರೋ ಡ್ರೋಣ್‍ಗಳಿಗೆ ಪೈಲೆಟ್ ಲೈಸೆನ್ಸ್ ಕೂಡ ಬೇಕಿಲ್ಲ ಎಂದು ತಿಳಿಸಲಾಗಿದೆ.

Indresh KC

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago