News Karnataka Kannada
Wednesday, May 01 2024
ದೇಶ

ದೇಶದಲ್ಲಿ ಮತ್ತೆ ಕೋವಿಡ್‌ ಪ್ರಕರಣ ಹೆಚ್ಚಳ– 41,649 ಮಂದಿಗೆ ಸೋಂಕು

Corona World 10072021
Photo Credit :

ನವದೆಹಲಿ: 3ನೇ ಅಲೆಯ ಆತಂಕದ ನಡುವೆ ದೇಶದಲ್ಲಿ ಮತ್ತೆ ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 41,649 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 593 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,16,13,993ಕ್ಕೆ ತಲುಪಿದ್ದು, ಸಾವಿನ 4,23,810ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,03,840ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 37,291 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,07,81,263ಕ್ಕೆ ತಲುಪಿದೆ. ಕಳೆದ ನಾಲ್ಕು ದಿನಗಳಿಂದ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,08,920ಕ್ಕೆ ಏರಿಕೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು