ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅಂತರದಲ್ಲಿ 44,658 ಕೋವಿಡ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 32,988 ಮಂದಿ ಗುಣಮುಖರಾಗಿದ್ದಾರೆ ಹಾಗೂ 496 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3.26 ಕೋಟಿ ದಾಟಿದೆ. ಒಟ್ಟು ಪ್ರಕರಣಗಳ ಪೈಕಿ 3.18 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ, ಚೇತರಿಕೆ ಪ್ರಮಾಣ ಶೇ 97.60ರಷ್ಟಿದೆ.
ಕೋವಿಡ್ ಕಾರಣಗಳಿಂದಾಗಿ 4,36,861 ಜನ ಸಾವಿಗೀಡಾಗಿದ್ದಾರೆ. ಪ್ರಸ್ತುತ 3,44,899 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ.