ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು, ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 76,57,17,137 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 64,51,423 ಜನ ಲಸಿಕೆ ಪಡೆದಿದ್ದಾರೆ.
ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 4,84,05,613 ಮಂದಿ ಲಸಿಕೆ ಪಡೆದಿದ್ದು, 3,56,24,902 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 1,27,80,711 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.